ಮಂಗಳೂರು : ಓಲೈಕೆ ರಾಜಕಾರಣಕ್ಕಾಗಿ ಹಿಂದುಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ
ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಪ್ ಆಸ್ತಿ ಎಂದು ಘೋಷಿಸಲು ಹುನ್ನಾರ ನಡೆಸಿರುವುದು ಅತ್ಯಂತ
ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಲತಲಾಂತರಗಳಿಂದ ತಮ್ಮ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದ ರೈತರಿಗೆ ವಕ್ಪ್ ಮಂಡಳಿ ರಾಜ್ಯ ಸರ್ಕಾರದ ಬೆಂಬಲದಿಂದ ಏಕಾಏಕಿ ನೋಟಿಟ್ ನೀಡಿ ಸುಮಾರು 15 ಸಾವಿರ ಎಕರೆ ಭೂಮಿ ಕಬಳಿಸುವ ಹುನ್ನಾರ ನಡೆಸಿರುವುದು ಅಕ್ಷಮ್ಯ. ತಮಿಳುನಾಡು, ಬಿಹಾರದಂತಹ ರಾಜ್ಯಗಳಲ್ಲಿ ಇಂತಹ ಅನ್ಯಾಯವನ್ನು ಕಾಣುತ್ತಿದ್ದೆವು. ಈಗ ಕರ್ನಾಟಕಕ್ಕೆ ವ್ಯಾಪಿಸಿದ್ದು, ದ.ಕ.ಜಿಲ್ಲೆಗೂ ಬರುವ ದಿನಗಳು ದೂರವಿಲ್ಲ. ರೈತರ ಭೂಮಿಗೆ ಕನ್ನ ಹಾಕಿ, ಅವರ ಬದುಕನ್ನು ಕಸಿದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅವರ ಶಾಪ ತಟ್ಟದೇ ಇರದು. ರಾಜ್ಯ ಬಿಜೆಪಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಹೋರಾಟ ನಡೆಸಿಯಾದರೂ ಸರಿ, ಯಾವುದೇ ಕಾರಣಕ್ಕೂ ರೈತರಿಗೆ
ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.