ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಚಕ್ರವರ್ತಿ ಸೂಲಿಬೆಲೆ ಅವರಂತಹ ಚಿಂತಕರನ್ನು ಗುರಿಯಾಗಿಸಿ ಷಡ್ಯಂತ್ರ ರೂಪಿಸಿದ್ದು ದಾಖಲೆಗಳ ಸಹಿತ ಸ್ಪಷ್ಟವಾಗಿದೆ. ತನ್ಮೂಲಕ ಕಾಂಗ್ರೆಸ್ ತಾನು ಎಂದಿಗೂ ಹಿಂದೂ ವಿರೋಧಿಯೇ ಎಂಬುದನ್ನು ಮತ್ತೆ ಸಾಬೀತು ಪಡಿಸಿದೆ
ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುವ ಮತೀಯ ಶಕ್ತಿಗಳ ಹೆಡೆಮುರಿ ಕಟ್ಟುವ ಬದಲು ದೇಶ, ಧರ್ಮದ ಬಗ್ಗೆ ಯುವ ಜನಾಂಗವನ್ನು
ಜಾಗೃತಿಗೊಳಿಸಿ ನಾಡಿನಾದ್ಯಂತ ಖ್ಯಾತಿ ಗಳಿಸಿರುವ ಸೂಲಿಬೆಲೆ ಅವರ ವಿರುದ್ದ ಕ್ರಮ ಕೈಗೊಳ್ಳಲು ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಚು ನಡೆಸಿದೆ. ಕರಾವಳಿಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು, ಹಿಂದೂ ಸಂಘಟನೆಗಳ ಮುಖಂಡರನ್ನು ಬೆದರಿಸುವ ಚಾಳಿ ಆರಂಭಿಸಿರುವ ರಾಜ್ಯ ಸರ್ಕಾರ ಹಿಂದೂಗಳ ಪಾಲಿಗೆ ತುರ್ತು ಪರಿಸ್ಥಿತಿಯ ವಾತಾವರಣವನ್ನು ಸೃಷ್ಟಿಸಿದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ದೇಶ
ಭಕ್ತರ ರಕ್ಷಣೆಗೆ ಬಿಜೆಪಿ ಸದಾ ಸಿದ್ದವಾಗಿರುತ್ತದೆ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
...............................