ಜಿಲ್ಲೆ

ಬಾಲಕಿಗೆ ಸೂಕ್ತ ರಕ್ಷಣೆ - ಅಶೋಕ್ ಕುಮಾರ್ ರೈ ಮಾಹಿತಿ

Mangaluru - Nishantha Narayana

ವಿಟ್ಲ: ಮಾಣಿಲದಲ್ಲಿ ದೌರ್ಜನ್ಯಕ್ಕೊಳಗಾದ ಅಪ್ರಾಪ್ತೆಯ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪಾಲಕರ ಜತೆಗೆ ಮಾತುಕತೆ ನಡೆಸಿದರು.

ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಽಶರ ಮುಂದೆ ಸಂತ್ರಸ್ತೆ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿದ್ದ ವ್ಯಕ್ತಿ ತಲೆಮರೆಸಿಕೊಂಡಿದ್ದು, ಕಾನೂನಿನಡಿಯಲ್ಲಿ ಅಗತ್ಯ ಕ್ರಮಕ್ಕೆ ತೆಗೆದುಕೊಳ್ಳಲಾಗುವುದು. ಮನೆಯವರು ಬೆದರಿಕೆ ಕರೆ ಬರುತ್ತಿರುವ ಬಗ್ಗೆ ತಿಳಿಸಿದ್ದು, ಸೂಕ್ತ ರಕ್ಷಣೆ ನೀಡುವ ನಿಟ್ಟಿನಲ್ಲಿ ಪೊಲೀಸ್ ಹಿರಿಯ ಅಽಕಾರಿಗಳಿಗೆ ಮಾತನಾಡಿ ಬೆದರಿಕೆ ಕರೆ ಮಾಡಿದವರ ಮೇಲೆಯೂ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಮುರಳೀಧರ ರೈ ಮಠಂತಬೆಟ್ಟು, ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ ಬಾಳೆಕಲ್ಲು, ಸದಸ್ಯರಾದ ವಿಷ್ಣು ಭಟ್ ಕೊಮ್ಮುಂಜೆ, ವನಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಬ್ಲಾಕ್ ಉಪಾಧ್ಯಕ್ಷ ಜಯರಾಮ ಬಲ್ಲಾಳ್, ಪ್ರಮುಖರಾದ ನಾಗಚಂದ್ರ, ರವಿ ಮಾಣಿಲ, ಪಿ. ಕೆ. ನಾರಾಯಣ, ಪುಷ್ಪರಾಜ್ ಉಪಸ್ಥಿತರಿದ್ದರು.