ವಿಜಯವಾಣಿ ಸುದ್ದಿಜಾಲ ಹೆಬ್ರಿ
ಹೆಬ್ರಿ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಮಲ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ತ್ಯಾಜ್ಯ ಸಂಸ್ಕರಣ ಘಟಕದ ಕಾಮಗಾರಿ ಸ್ಥಳಕ್ಕೆ ಶಾಸಕ ಸುನೀಲ್‌ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕ ಸುನೀಲ್‌ಕುಮಾರ್ ಈ ಕುರಿತು ಪ್ರತಿಕ್ರಿಯಿಸಿದ್ದು, ಮಲ ತ್ಯಾಜ್ಯ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ, ಏಜೆನ್ಸಿ ಅಥವಾ ಸ್ವಸಹಾಯ ಸಂಘಗಳಿಗೆ ನೀಡುವುದರ ಜತೆಗೆ ಕನಿಷ್ಠ ದರ ನಿಗದಿಪಡಿಸಬೇಕು. ತ್ಯಾಜ್ಯ ನಿರ್ವಹಣೆ ವಾಹನವನ್ನು ಶೀಘ್ರವೇ ಖರೀದಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ್ ಎಸ್.ಬಂಗೇರ, ಉಪಾಧ್ಯಕ್ಷೆ ಸುಪ್ರಿಯಾ, ಪಿಡಿಒ ಸದಾಶಿವ ಸೆರ್ವೆಗಾರ್, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಇಂಜಿನಿಯರ್ ಸುರೇಂದ್ರನಾಥ್, ಆರ್‌ಎಫ್‌ಒ ಸಿದ್ದೇಶ್ವರ, ಸದಸ್ಯರು ಹಾಗೂ ಗ್ರಾಮಸ್ಥರಿದ್ದರು.