ಜಿಲ್ಲೆ

ಸರ್ಕಾರಿ ಐಟಿಐಗೆ ಶಾಸಕ ಟೆಂಗಿನಕಾಯಿ ಭೇಟಿ

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ (ಐಟಿಐ) ಸಂಸ್ಥೆಗೆ ಬುಧವಾರ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ, ವೀಕ್ಷಣೆ ಮಾಡಿದರು.

ವಿದ್ಯಾರ್ಥಿಗಳ ಕಾರ್ಯಾಗಾರಗಳ ಕೊಠಡಿ ಹಾಗೂ ಸಂಸ್ಥೆಯ ಮುಖ್ಯ ಆಡಳಿತ ಕಚೇರಿಯ ದುರಸ್ಥಿ ಕಾಮಗಾರಿಗೆ ಚಾಲನೆ ನೀಡಿದರು.

ತರಬೇತಿ ಕೇಂದ್ರದ ಪ್ರಾಚಾರ್ಯರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಮೂಲ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ್, ಪ್ರಾಚಾರ್ಯ ಧರ್ಮ ಲಮಾಣಿ, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.