ವಿಜಯವಾಣಿ ಸುದ್ದಿಜಾಲ ಉಡುಪಿ
ಜನಸಂಖ್ಯೆ ದಿನೇದಿನೆ ಹೆಚ್ಚುತ್ತಲಿದ್ದು, ದೇಶ ಆರ್ಥಿಕವಾಗಿ ಸದೃಢಗೊಳ್ಳಲು ಮುಂದೆ ತೊಡಕಾಗಬಹುದು. ಶಿಕ್ಷಣ, ಆರೋಗ್ಯ, ಮೂಲಸೌಲಭ್ಯ ಸಮರ್ಪಕವಾಗಿ ಸಿಗಲೂ ಸಹ ತೊಂದರೆ ಉಂಟಾಗಬಹುದು. ಹೀಗಾಗಿ ಇಂದಿನ ಇಂದಿನ ಯುವಪೀಳಿಗೆ ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಜನಸಂಖ್ಯೆ ನಿಯಂತ್ರಣದ ವಿಚಾರವನ್ನೂ ಅರಿತುಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದರು.
ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ಜಿಲ್ಲಾ ರೆಡ್ಕ್ರಾಸ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜುಲೈ 14ರಂದು ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮೆನೇಜ್ಮೆಂಟ್ನ ನಿರ್ದೇಶಕ ಡಾ. ಪಿ.ಎಸ್. ಐತಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಜಿ . ಹುಬ್ಬಳ್ಳಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಅಲೆವೂರು ದಿನೇಶ ಕಿಣಿ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ನಗರ ಆರೋಗ್ಯ ಕೇಂದ್ರ ಉಡುಪಿಯ ವೈದ್ಯಾಧಿಕಾರಿ ಡಾ. ಸಾತ್ವಿಕ್ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಶ್ರೀರಾಮ ರಾವ್ ಕೆ. ಜನಸಂಖ್ಯಾ ವಿಚಾರವಾಗಿ ಮಾಹಿತಿ ನೀಡಿದರು.
ಕಾಲೇಜಿನ ವಿದ್ಯಾರ್ಥಿನಿಯರಾದ ಶ್ರೀನಿಧಿ, ದೀಕ್ಷಾ ಹಾಗೂ ನಂದಿನಿ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಸ್ವಾಗತಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ವಂದಿಸಿದರು.