ವಿಜಯವಾಣಿ ಸುದ್ದಿಜಾಲ ಉಡುಪಿ
ಚಿಣ್ಣರ ವಿದ್ಯಾಭ್ಯಾಸಕ್ಕೆ ಅಡಿಪಾಯವಾಗಿ ಪ್ರಥಮ ಹಂತದ ಶಿಕ್ಷಣಕ್ಕೆ ಸಜ್ಜುಗೊಳಿಸುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ. ಮಕ್ಕಳಿಗೆ ಪ್ರಥಮವಾಗಿ ಅಕ್ಷರ ಜ್ಞಾನ ನೀಡುವ ದೇಗುಲಗಳಿವು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಕಡೆಕಾರ್ ಗ್ರಾಪಂ ವ್ಯಾಪ್ತಿಯ ಕುತ್ಪಾಡಿ ಪಡುಕರೆಯಲ್ಲಿ ಅಂದಾಜು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಗುರುವಾರ ಉದ್ಘಾಟಿಸಿ ಮಾತನಾಡಿದರು.
ಪುಟಾಣಿ ಮಕ್ಕಳಿಗೆ ಪೌಷ್ಟಿಕಾಂಶಭರಿತ ಆಹಾರದ ಜತೆಗೆ ಒಳ್ಳೆಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರದಿಂದ ಸದಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ್, ಗ್ರಾಪಂ ಸದಸ್ಯರಾದ ಪ್ರವೀಣ್ ಮೆಂಡನ್, ವೇದಾವತಿ ರವಿ ಸುವರ್ಣ, ಬಾಲ ವಿಕಾಸ ಸಮಿತಿಯ ಅಧ್ಯೆ ಪೂರ್ಣಿಮಾ, ಸ್ಥಳ ದಾನಿಗಳಾದ ಗಂಗಾಧರ ಸಾಲ್ಯಾನ್, ಸ್ಥಳೀಯರಾದ ಭುವನ್ ಪಡುಕರೆ, ಅಂಗನವಾಡಿ ಕಾರ್ಯರ್ತೆಯರು ಹಾಗೂ ಪಾಲಕರು ಉಪಸ್ಥಿತರಿದ್ದರು.