ವಿಜಯವಾಣಿ ಸುದ್ದಿಜಾಲ ಉಡುಪಿ
ಉಡುಪಿಯಲ್ಲಿರುವ ಹೈ-ಟೆಕ್ ಫಿಶ್ ಮಾರ್ಕೆಟ್ಗೆ ಅಗತ್ಯವಿರುವ ಎಲ್ಲ ಸೌಲಭ್ಯ-ಸೌಕರ್ಯ ನೀಡಲು ತಕ್ಷಣವೇ ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಗರಸಭಾ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಉಡುಪಿಯಲ್ಲಿರುವ ಹೈ-ಟೆಕ್ ಮೀನು ಮಾರುಕಟ್ಟೆಗೆ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಅಧಿಕಾರಿಗಳೊಡನೆ ಜುಲೈ 3ರಂದು ಭೇಟಿ ನೀಡಿ ಪರಿಶೀಲಿಸಿ, ಮಾತನಾಡಿದರು.
ಮೀನು ಮಾರಾಟ ಮಹಿಳೆಯರ ಬೇಡಿಕೆಗೆ ಸ್ಪಂದಿಸಿದ ಶಾಸಕ ಯಶ್ಪಾಲ್, ನಗರದ ಕೇಂದ್ರ ಭಾಗದಲ್ಲಿರುವ ಮೀನು ಮಾರುಕಟ್ಟೆಗೆ ಮೂಲ ಸೌಕರ್ಯ ನೀಡಲು ಹಾಗೂ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಲಾಗುವುದು. ನಗರಸಭೆ ಮೂಲಕ ಮೀನು ಮಾರಾಟಗಾರರು ಹಾಗೂ ಗ್ರಾಹಕರಿಗೆ ಉತ್ತಮ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಉಡುಪಿ ತಾಲೂಕು ಹಸಿ ಮೀನು ಮಾರಾಟಗಾರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ನಗರಸಭಾ ಸದಸ್ಯೆ ಮಾನಸಾ ಸಿ. ಪೈ, ಪೌರಾಯುಕ್ತ ಮಹಾಂತೇಶ ಹಂಗರಗಿ, ಅಧಿಕಾರಿಗಳಾದ ರವಿ ಪ್ರಕಾಶ್, ಕಾರ್ತಿಕ್ ಇತರರಿದ್ದರು.