ಜಿಲ್ಲೆ

ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್​ಪಾಲ್​ ಭೇಟಿ

ಗೋಪಾಲಕೃಷ್ಣ ಪಾದೂರ್

ಉಡುಪಿ: ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ಸೋಮವಾರ ಭೇಟಿ ನೀಡಿ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪ್ರಸ್ತುತ ನೀರಿನ ಲಭ್ಯತೆ ಇರುವುದರಿಂದ ಈ ವಾರ ಪೂರ್ತಿ ನಿರಂತರ ನೀರು ಪೂರೈಕೆಗೆ ಮಾಡಬಹುದು. ಮುಂದಿನ ವಾರದ ಲಭ್ಯತೆ ಪರಿಗಣಿಸಿ ರೇಷನಿಂಗ್​ ವ್ಯವಸ್ಥೆಯ ಬಗ್ಗೆ ನಿರ್ಧರಿಸುವಂತೆ ಹಾಗೂ ವ್ಯವಸ್ಥಿತ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಸಭೆ ವ್ಯಾಪ್ತಿಯ ಸಾರ್ವಜನಿಕ ಬಾವಿ ಹಾಗೂ ಕೊಳವೆ ಬಾವಿ ಮುಂತಾದ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಈಗಾಗಲೇ ಟ್ಯಾಂಕರ್​ ನೀರು ಸರಬರಾಜು ಟೆಂಡರ್​ ಪಡೆದ ಗುತ್ತಿಗೆದಾರರ ಮೂಲಕ ಅವಶ್ಯಕ ಪ್ರದೇಶಗಳಿಗೆ ನೀರು ಒದಗಿಸಬೇಕು ಎಂದು ತಿಳಿಸಿದರು.

ಇಂದು ವಾರಾಹಿ ಸಭೆ
ವಾರಾಹಿ ಕುಡಿಯುವ ನೀರಿನ ಯೋಜನೆಯ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿ, ವಾರಾಹಿ ನೀರು ಸರಬರಾಜು ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್​ ಅಂಚನ್​, ಬಾಲಕೃಷ್ಣ ಶೆಟ್ಟಿ, ಸುಂದರ ಕಲ್ಮಾಡಿ, ನಗರಸಭೆ ಎ ಇ ಇ ಯಶವಂತ್​ ಪ್ರಭು ಮೊದಲಾದವರು ಉಪಸ್ಥಿತರಿದ್ದರು.