ಜಿಲ್ಲೆ

ಟೋಲ್ ಸುಂಕ ವಿನಾಯಿತಿಗೆ ಶಾಸಕರಿಂದ ಮನವಿ

ಇಂದಿರಾ ಎನ್ ಕೆ

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ವಾಹನಗಳಿಗೆ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಮನವಿ ಸಲ್ಲಿಸಿದರು.

ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್‌ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿ ಮಾಡುತ್ತಾ ಬರಲಾಗುತ್ತಿದೆ. ಸಾಸ್ತಾನ ಟೋಲ್‌ಗೇಟ್‌ನಲ್ಲಿ ಕೋಟ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸುವಂತೆ ಮನವಿ ಮಾಡಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಾಕಾಂತ್ ಪಡುಬಿದ್ರಿ, ಮಿಥುನ್ ಆರ್.ಹೆಗ್ಡೆ ಇದ್ದರು.