ಜಿಲ್ಲೆ

ಚಿಕ್ಕೋಡಿ ಬಿಇಒ ವಿರುದ್ಧ ಕ್ರಮ ಆಗದಿದ್ದರೆ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ; ಹುಕ್ಕೇರಿ ಎಚ್ಚರಿಕೆ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ:ಚಿಕ್ಕೋಡಿ ಶೈಕ್ಷಣಿಕ ವಲಯದ ವ್ಯಾಪ್ತಿಯ ಚಿಕ್ಕೋಡಿ ಬಿಇಒ ವಿರುದ್ಧ ಕ್ರಮ ಕೈಗೊಳ್ಳಲು ಏಕೆ ಮೀನಾಮೇಷ ಮಾಡುತ್ತಿದ್ದೀರಿ. ಒಂದು ವೇಳೆ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಾನೇ ರಾಜೀನಾಮೆ ಕೊಡುತ್ತೇನೆ ಎಂದು ಪ್ರಕಾಶ ಹುಕ್ಕೇರಿ ಆಕ್ರೋಶ ವ್ಯಕ್ತಪಡಿಸಿದರು.

ಸುವರ್ಣ ವಿಧಾನಸೌದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ಪದೇ ಪದೇ ತಪ್ಪು ಮಾಡುತ್ತಿದ್ದರು ಕ್ರಮ ಏಕೆ ಕೈಗೊಳ್ಳುತ್ತಿಲ್ಲ ಎಂದು ಡಿಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮಧ್ಯಪ್ರವೇಶಿಸಿದ ಸಚಿವ ಸತೀಶ ಜಾರಕಿಹೊಳಿ, ಬಿಇಒ ನಿರ್ಲಕ್ಷ, ನಡುವಳಿಕೆ ಸರಿಯಿಲ್ಲ ಎಂದು ಎಂ ಎಲ್‌ಸಿ ಹೇಳುತ್ತಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಿ ಎಂದು ಸೂಚನೆ ನೀಡಿದರು.

.......................