ಜಿಲ್ಲೆ

ವೇತನ ಪಾವತಿಗೆ ಒತ್ತಾಯ: ಮನರೇಗಾ ನೌಕರರ ಮನವಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಕೊಡಿಸಿ ಕೊಡಬೇಕೆಂದು ಜಿಪಂ ಸಿಇಒ ಕೆ.ಆರ್.ನಂದಿನಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಜಿಪಂ ಮಿನಿ ಸಭಾಂಗಣದಲ್ಲಿ ಸಿಇಒ ಅವರನ್ನು ಭೇಟಿ ಮಾಡಿ ನರೇಗಾ ಸಿಬ್ಬಂದಿ, ಕಳೆದ 12 ವರ್ಷದಿಂದ ಮನರೇಗಾ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಾ ಬಂದಿದ್ದೇವೆ. ಕಳೆದ 6 ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ. ಇದರಿಂದಾಗಿ ಜೀವನ ಹಾಗೂ ಕುಟುಂಬ ನಿರ್ವಹಣೆ ಕಷ್ಟಕರವಾಗಿದ್ದು, ಕೂಡಲೇ ವೇತನ ಪಾವತಿಗೆ ಬಿಡುಗಡೆಗೊಳಿಸಲು ಮನವಿ ಮಾಡಿಕೊಳ್ಳಲಾಯಿತು.

ಉಪಕಾರ್ಯದರ್ಶಿ(ಅಭಿವೃದ್ಧಿ) ಟಿ.ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಚಂದ್ರ ಇತರರಿದ್ದರು.