ಜಿಲ್ಲೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌ಕಣ್ಣೀರು!

ಬೆಳಗಾವಿ: ಹಿರಿಯರ ಸದನ, ಬುದ್ಧಿವಂತ ರ ಚಾವಡಿ ಎಂದು ಕರೆಯುವ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯನ ಅಂತಹ ಪದ ಬಳಕೆ ನನಗೆ ತುಂಬಾ ನೋವು ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು ಹಾಕಿದರು.

ಇಲ್ಲಿನ ಕುವೆಂಪು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ವೇಳೆ ಸದನವನ್ನು ಸಭಾಪತಿ 10 ನಿಮಿಷಗಳ ಕಾಲ ಮುಂದೂಡಿದರು. ಈ ಸಂದರ್ಭದಲ್ಲಿ ನಡೆದ ಘಟನೆ ಎಲ್ಲರಿಗೂ ತಿಳಿದ ವಿಷಯ ಎಂದರು.

ನಮ್ಮ ನಾಯಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ ಗಾಂಧಿ ಅವರಿಗೆ ಡ್ರಗ್ ಎಡಿಟ್ ಎಂದು ನನ್ನ ನೋಡಿ ಕೂಗಾಡಿದರು. ನಾನು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೀವು ಅಪಘಾತ ಮಾಡಿದ್ದೀರಾ ನೀಮ್ಮನ್ನು ಕೊಲೆಗಡುಕರು ಎನ್ನಬಹುದಾ ಎಂದ ಕೂಡಲೇ ನನಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ನೋವು ಉಂಟು ಮಾಡಿದೆ ಎಂದರು.