ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ.
ಬಳಿಕ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯ, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ.
ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ಮುಗಿಸಿಕೊಂಡು ರಸ್ತೆಯ ಮೂಲಕ ಬೆಳಗಾವಿಗೆ ಬರುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ