ಜಿಲ್ಲೆ

ಮಧುಗಿರಿಯಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ; ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರಪ್ಪ ಮಾಹಿತಿ

ಮಧುಗಿರಿ: ಕರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನಸಂದಣಿ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಮಧುಗಿರಿ ತಾಲೂಕಿನಲ್ಲಿ ಸಂಚಾರಿ ಮೊಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರಪ್ಪ ತಿಳಿಸಿದರು.

ಪುರಸಭೆ ಆವರಣದಲ್ಲಿ ಶನಿವಾರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಆರಂಭಿಸಿರುವ ಮೊಬೈಲ್ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ದಿನೇದಿನೆ ಕರೊನಾ ಪ್ರಕರಣ ಹೆಚ್ಚುತ್ತಿದ್ದು, ಎಲ್ಲರೂ ಆರೋಗ್ಯ ತಪಾಸಣೆಗೆ ಒಳಪಡಿಸಿ ಪಾಸಿಟಿವ್ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ್ ಬಾಬು ಮಾತನಾಡಿ, ಮಧುಗಿರಿ ತಾಲೂಕಿನಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ಸೂಚನೆ ಮೇರೆಗೆ ಶಿರಾದಲ್ಲಿದ್ದ ಮೊಬೈಲ್ ಫೀವರ್ ಕ್ಲಿನಿಕ್ ಅನ್ನು ಮಧುಗಿರಿಗೆ ಸ್ಥಳಾಂತರಿಸಲಾಗಿದೆ. ಪೌರ ಕಾರ್ಮಿಕರಿಗೆ ಸಾಮೂಹಿಕವಾಗಿ ಪರೀಕ್ಷೆ ನಡೆಸಲಾಗುವುದು, ನಂತರ ಐಸೋಲೇಷನ್ ಸ್ಥಳಗಳಲ್ಲಿಯೂ ಪರೀಕ್ಷೆ ನಡೆಸಲಾಗುವುದು ಎಂದರು.

ಆಸ್ಪತ್ರೆಯಲ್ಲಿರುವಂತೆ ಸೌಲಭ್ಯ: ಮೊಬೈಲ್ ಫೀವರ್ ಕ್ಲಿನಿಕ್‌ನಲ್ಲಿ ಆಸ್ಪತ್ರೆಯಲ್ಲಿರುವ ರೀತಿಯಲ್ಲಿಯೇ ಎಲ್ಲ ಸೌಲಭ್ಯ ಇರಲಿದೆ. ಮೊದಲು ವ್ಯಕ್ತಿಯನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ನಂತರ ಬಿಪಿ ಇನ್ನಿತರ ಪರೀಕ್ಷೆ ನಡೆಸಿ ವ್ಯಕ್ತಿಯನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ನಂತರ ನೋಂದಣಿ ಪ್ರಕ್ರಿಯೆ ನಡೆಸಿ ಕೊನೆಯಲ್ಲಿ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ನಡೆಸಿ ಮತ್ತೆ ಸ್ಯಾನಿಟೈಸ್ ಮಾಡಲಾಗುವುದು. ಕೌನ್ಸೆಲಿಂಗ್ ನಡೆಸಿ ಅವರಿಗೆ ಯಾವ ಬಗೆಯ ಕ್ವಾರಂಟೈನ್‌ಗೆ ಒಳಪಡಿಸಬೇಕೆಂದು ಶಿಫಾರಸು ಮಾಡಲಾಗುತ್ತದೆ. ಸೋಂಕು ಪತ್ತೆಯಾದಲ್ಲಿ ಸಾಮೂಹಿಕವಾಗಿ ಹರಡದಂತೆ ಕ್ರಮ ಕೈಗೊಳ್ಳಲಾಗುವುದು.

ಕೋವಿಡ್ ಹಾಟ್‌ಸ್ಪಾಟ್‌ಗಳಲ್ಲಿಗಂಟಲು ದ್ರವ ಪರೀಕ್ಷೆ ನಡೆಸಲಾಗುವುದು. ಆಸ್ಪತ್ರೆಗೆ ಬರದೇ ಇರುವವರ ಬಳಿಗೆ ಮೊಬೈಲ್ ಕ್ಲಿನಿಕ್ ತೆಗೆದುಕೊಂಡು ಹೋಗಿ ಪರೀಕ್ಷೆ ನಡೆಸಲಾಗುವುದು. ಡಾ.ಜಿ.ವಿಶ್ವನಾಥ್ ತಹಸೀಲ್ದಾರ್