ಮಡಿಕೇರಿ: ಜಿಲ್ಲೆಯ ವಿವಿಧೆಡೆ ಸೋಮವಾರ ಸಾಧಾರಣ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.
ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ತೋಜಿ ಬಳಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ೨೭೫ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ.
ಕಳೆದ೨೪ ಗಂಟೆಯಲ್ಲಿ ೧೬.೨೩ ಮಿ.ಮೀ. ಮಳೆ: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೧೬.೨೩ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ ೩೪.೬೮ ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ೧೧.೨೦ ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ ೧೫.೭೦ ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ೧೧.೯೫ ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ ಸರಾಸರಿ ೭.೬೦ ಮಿ.ಮೀ. ಮಳೆಯಾಗಿದೆ.
ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೨೧.೨೦, ನಾಪೋಕ್ಲು ೧೯, ಸಂಪಾಜೆ ೪೫.೫೦, ಭಾಗಮಂಡಲ ೫೩, ವಿರಾಜಪೇಟೆ ೧೩.೪೦, ಅಮ್ಮತ್ತಿ ೯, ಹುದಿಕೇರಿ ೧೪.೨೦, ಶ್ರೀಮಂಗಲ ೨೧.೬೦, ಪೊನ್ನಂಪೇಟೆ ೧೮, ಬಾಳೆಲೆ ೯, ಸೋಮವಾರಪೇಟೆ ಕಸಬಾ ೮.೬೦, ಶನಿವಾರಸಂತೆ ೫, ಶಾಂತಳ್ಳಿ ೨೧, ಕೊಡ್ಲಿಪೇಟೆ ೧೩.೨೦, ಕುಶಾಲನಗರ ೬.೨೦, ಸುಂಟಿಕೊಪ್ಪ ೯ ಮಿ.ಮೀ.ಮಳೆಯಾಗಿದೆ.