ಜಿಲ್ಲೆ

ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

ಮಡಿಕೇರಿ: ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಾಧಾರಣ ಮಳೆಯಾಗಿದೆ.


ಮಡಿಕೇರಿ ತಾಲೂಕಿನ ಗಾಳಿಬೀಡು, ಉಡೋತ್‌ಮೊಟ್ಟೆ, ತಾಳತ್ತಮನೆ, ಬೆಟ್ಟಗೇರಿ, ಬೋಯಿಕೇರಿ, ಮದೆನಾಡು, ಸಂಪಾಜೆ ಹಾಗೂ ಮಡಿಕೇರಿ ನಗರದ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಪರಿಣಾಮ ನಗರದಲ್ಲಿ ಬೀದಿಬದಿ ವ್ಯಾಪಾರಿಗಳು, ಶಾಲಾ ಮಕ್ಕಳು, ದ್ವಿಚಕ್ರ ಸವಾರರು ಮಳೆಯಲ್ಲಿ ಪರದಾಡಿದರು. ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಸೋಮವಾರಪೇಟೆ, ಶನಿವಾರಸಂತೆ, ವಿರಾಜಪೇಟೆ, ಗೋಣಿಕೊಪ್ಪ, ಕುಶಾಲನಗರ, ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ.


ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೩.೦೩ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ ೧.೯೫ ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ೧ ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ ೧.೧೩ ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ೧೦.೮೫ ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ ಸರಾಸರಿ ೦.೨೦ ಮಿ.ಮೀ. ಮಳೆಯಾಗಿದೆ.
ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೨.೮೦, ನಾಪೋಕ್ಲು ೨.೨೦, ಸಂಪಾಜೆ ೧, ಭಾಗಮಂಡಲ ೧.೮೦, ವಿರಾಜಪೇಟೆ ೨, ಹುದಿಕೇರಿ ೧.೫೦, ಪೊನ್ನಂಪೇಟೆ ೧, ಬಾಳೆಲೆ ೨, ಸೋಮವಾರಪೇಟೆ ಕಸಬಾ ೧.೮೦, ಶನಿವಾರಸಂತೆ ೪.೪೦, ಶಾಂತಳ್ಳಿ ೭.೨೦, ಕೊಡ್ಲಿಪೇಟೆ ೩೦, ಕುಶಾಲನಗರ ೦.೪೦ ಮಿ.ಮೀ.ಮಳೆಯಾಗಿದೆ.


ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨೮೫೯ ಅಡಿಗಳಿದ್ದು, ಶುಕ್ರವಾರ ೨೮೫೧.೩೦ ಅಡಿ ನೀರು ಸಂಗ್ರವಾಗಿದೆ. ಇಂದಿನ ನೀರಿನ ಒಳಹರಿವು ೧೬೭೩ ಕ್ಯುಸೆಕ್ ಇದ್ದು, ನೀರಿನ ಹೊರ ಹರಿವು ನದಿಗೆ ೨೦೦ ಕ್ಯುಸೆಕ್ ನೀರುಬಿಡಲಾಗುತ್ತಿದೆ.