ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 
ಜಿಲ್ಲೆ

ರಾಜ್ಯದಲ್ಲಿ ಸಂಚಲನ ಮೂಡಿಸಿದ ಮೋದಿ: ವಿಜಯೇಂದ್ರ

ನವೀನ ಬಿ.ಎಂ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಶಿವಮೊಗ್ಗ ಭೇಟಿಯಿಂದ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಶಿವಮೊಗ್ಗ ಸೇರಿ ಇಡೀ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದೆ. ಮೋದಿ ಭೇಟಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸೋಮವಾರ ವಿನೋಬನಗರದ ನಿವಾಸದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಮೋದಿ ಅಲೆ ಎದ್ದಿದೆ. ಇದರ ಪರಿಣಾಮ ಎಷ್ಟಿದೆ ಎಂದರೆ ಕಾಂಗ್ರೆಸ್‌ನವರಿಗೆ ಇನ್ನೂ ಅಭ್ಯರ್ಥಿಗಳನ್ನು ಹಾಕಲು ಹಿಂದೇಟು ಹಾಕುವಂತಾಗಿದೆ ಎಂದರು.
ಗ್ಯಾರಂಟಿ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದೆ. ಹಾಗಾಗಿ ಅಭ್ಯರ್ಥಿಗಳ ಘೋಷಣೆಗೆ ಹರಸಾಹಸ ಪಡುತ್ತಿದ್ದಾರೆ. ಕಳೆದ 10 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳು ಮನೆ ಮಾತಾಗಿವೆ. ಸ್ವಾತಂತ್ರಾೃನಂತರದಲ್ಲಿ ಮೊದಲ ಬಾರಿಗೆ ಕೇಂದ್ರದ ಯೋಜನೆಗಳು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿವೆ ಎಂದರು.