ಹುಬ್ಬಳ್ಳಿ: ನರೇಂದ್ರ ಮೋದಿ ಪ್ರಧಾನಿ ಮಂತ್ರಿಯಾಗಿದ್ದ ಆರಂಭದಿಂದಲೂ ಅವರಲ್ಲಿ ಸರ್ವಾಧಿಕಾರಿ ಮನೋಭಾವವಿಲ್ಲ. ಮೊದಲು ಹೇಗಿದ್ದರೋ ಹಾಗೆಯೇ ಈಗಲೂ ಇದ್ದಾರೆ. ಅವರ ವ್ಯಕ್ತಿತ್ವದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಅವರು ಮತ್ತೊಮ್ಮೆ ಪ್ರಧಾನಿಯಾದರೂ ಅವರಲ್ಲಿ ಸರ್ವಾಧಿಕಾರಿ ಭಾವನೆ ನುಸುಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಅಣ್ಣಿಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾಗಾಂಧಿ ಪ್ರಧಾನಿ ಆಗಿದ್ದ ವೇಳೆ 94 ರಾಜ್ಯ ಸರ್ಕಾರಗಳನ್ನು ಪತನಗೊಳಿಸಿದರು. ದೇಶದಲ್ಲಿ ತರ್ತು ಪರಿಸ್ಥಿತಿ ಹೇರಿದರು. ಅವರಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ಅಭದ್ರಗೊಂಡಿರುವುದು ಇಂದಿರಾ ಗಾಂಧಿ ಕಾಲದಲದಲ್ಲಿ ಎಂದು ಆರೋಪಿಸಿದರು.