ಸೋಮವಾರಪೇಟೆ ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ತಾಲೂಕು ಮೊಗೇರ ಯುವ ವೇದಿಕೆ ವತಿಯಿಂದ ಆಯೋಜಿಸಿರುವ ಮೊಗೇರ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯ ಪಿ.ಎಂ.ರವಿ ಚಾಲನೆ ನೀಡಿದರು. ಯಾಕುಬ್, ಸುರೇಶ್, ಚಂದ್ರು, ಚಂದ್ರ ಇದ್ದರು. 
ಜಿಲ್ಲೆ

ಮೊಗೇರ ಪ್ರಿಮಿಯರ್ ಲೀಗ್‌ಗೆ ಚಾಲನೆ

ನಾಗೇಶ ಎಸ್

ಸೋಮವಾರಪೇಟೆ: ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ತಾಲೂಕು ಮೊಗೇರ ಯುವ ವೇದಿಕೆ ವತಿಯಿಂದ ಆಯೋಜಿಸಿರುವ ಮೊಗೇರ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯ ಪಿ.ಎಂ.ರವಿ ಶನಿವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ನಮ್ಮ ಸಂಸ್ಕೃತಿ, ಆಚಾರ-ವಿಚಾರ, ಪದ್ಧ್ದತಿ-ಪರಂಪರೆಯನ್ನು ಉಳಿಸಿಕೊಂಡು ಮುಂದೆ ಸಾಗಲು ಸಮಾಜ ಬಾಂಧವರ ಒಗ್ಗೂಡುವಿಕೆ ಅಗತ್ಯ. ಕ್ರೀಡೆಯಿಂದ ಸಂಘಟನೆ ಸಾಧ್ಯ. ಮೊಗೇರ ಸಮಾಜವು ಜಿಲ್ಲೆಯಲ್ಲಿ 2003ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಅಲ್ಲಿಂದ ಇಲ್ಲಿಯವರೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು.

ಜಿಲ್ಲೆಯಲ್ಲಿ 40 ಸಾವಿರಕ್ಕೂ ಅಧಿಕ ಮೊಗೇರ ಸಮಾಜದವರಿದ್ದು, ಒಗ್ಗಟ್ಟು ಸಾಧಿಸಬೇಕಿದೆ. ಸಮುದಾಯದ ಯುವ ಜನಾಂಗ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಬೇಕು. ಗ್ರಾಮ ಮಟ್ಟದಲ್ಲಿ ಸಂಘಟನೆಗಳು ಬಲಗೊಳ್ಳಬೇಕು ಎಂದು ಅಭಿಪ್ರಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ.ಯಾಕೂಬ್ ಮಾತನಾಡಿ, ಹಲವು ವರ್ಷಗಳಿಂದ ಲೈನ್‌ಮನೆಗಳಲ್ಲಿಯೇ ನೆಲೆಸಿರುವ ಮೊಗೇರ ಸಮುದಾಯದವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸಂಘಟನೆಯವರು ಶಾಸಕರು, ಸರ್ಕಾರದ ಗಮನ ಸೆಳೆಯಬೇಕು ಎಂದು ಸಲಹೆ ನೀಡಿದರು.

ಮೊಗೇರ ಯುವ ವೇದಿಕೆ ಅಧ್ಯಕ್ಷ ಪಿ.ಬಿ.ಸುರೇಶ್, ತಾಲೂಕು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಮೊಗೇರ ಸಮಾಜದ ಗೌರವಾಧ್ಯಕ್ಷ ಪಿ.ಕೆ. ಚಂದ್ರು, ಉಪಾಧ್ಯಕ್ಷ ವೆಂಕಪ್ಪ, ಜಿಲ್ಲಾ ಕ್ರೀಡಾ ಸಮಿತಿ ಅಧ್ಯಕ್ಷ ಎಂ.ಜಿ. ಚಂದ್ರ, ಖಜಾಂಚಿ ದೇವರಾಜ್ ಇದ್ದರು.