ಜಿಲ್ಲೆ

ಮುಹಮ್ಮದ್ ಅನ್ಸಾರ್‌ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Dakshina Kannada

ಮಂಗಳೂರು: ದಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯ ವರದಿಗಾರ ಮೊಹಮ್ಮದ್ ಅನ್ಸಾರ್ ಇನೋಳಿ ಆಯ್ಕೆಯಾಗಿದ್ದಾರೆ.

ವಿಜಯವಾಣಿಯಲ್ಲಿ 2019, ಮೇ 21ರಂದು ಪ್ರಕಟಗೊಂಡ ‘ಸಂಬಂಧ ಗಟ್ಟಿಗೊಳಿಸಿದ ರಮಜಾನ್’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ರೂ.5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಜುಲೈ1ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಹಿರಿಯ ಪತ್ರಕರ್ತರಾದ ಸುರೇಂದ್ರ ಶೆಟ್ಟಿ, ರವಿಪ್ರಸಾದ್ ಕಮಿಲ ಮತ್ತು ಉಪನ್ಯಾಸಕಿ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿ ಈ ಆಯ್ಕೆ ನಡೆಸಿದೆ ಎಂದು ಪ್ರಕಟಣೆ ತಿಳಿಸಿದೆ.