ಜಿಲ್ಲೆ

ಮೊಯ್ಲಿ ಸೂಚಿಸಿದವರೆ ನಾಯಕ: ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಪೂಜಾರಿ ಹೇಳಿಕೆ

Udupi

ಹೆಬ್ರಿ: ಯುವ ಸಮುದಾಯವನ್ನು ಬಳಸಿಕೊಂಡು ನಾವೆಲ್ಲ ಒಗ್ಗಟ್ಟಾಗಿ ಪಕ್ಷ ಸಂಘಟಿಸಬೇಕಿದೆ.ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ವೈಭವ ಮತ್ತೆ ಮರುಕಳಿಸುವಂತೆ ಕಾರ್ಯನಿರ್ವಹಿಸಬೇಕಿದೆ. ವೀರಪ್ಪ ಮೊಯ್ಲಿ ಸೂಚಿಸಿದವರೇ ನಮ್ಮ ಮುಂದಿನ ನಾಯಕ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.

ಹೆಬ್ರಿಯಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶಕ್ಕೆ ಕಾರ್ಕಳ ಕ್ಷೇತ್ರದಿಂದ 5 ಬಸ್‌ಗಳಲ್ಲಿ ಕಾರ್ಯಕರ್ತರು ತೆರಳಲಿದ್ದೇವೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್ ಕಬ್ಬಿನಾಲೆ, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ ಶೆಟ್ಟಿ, ವಿವಿಧ ಘಟಕಗಳ ಪ್ರಮುಖರಾದ ಗುಳ್ಕಾಡು ಭಾಸ್ಕರ ಶೆಟ್ಟಿ, ಎಚ್.ಬಿ.ಸುರೇಶ್, ಶೀನ ಪೂಜಾರಿ, ರಾಘವ ದೇವಾಡಿಗ, ಪ್ರಕಾಶ ಪೂಜಾರಿ ಕೆರ್ವಾಸೆ, ರಕ್ಷಿತ್ ರಾಜ್ ಮುಂತಾದವರು ಉಪಸ್ಥಿತರಿದ್ದರು.