ಜಿಲ್ಲೆ

ಸಾಮಾಜಿಕ ನ್ಯಾಯದಡಿ ಮೋದಿ ಸೇವೆ

Chitradurga

ಮೊಳಕಾಲ್ಮೂರು: ದೇಶವನ್ನು ಸಂಕಷ್ಟದಿಂದ ಪಾರು ಮಾಡಲು ಆತ್ಮನಿರ್ಭರ ಭಾರತ ಯೋಜನೆ ಸಹಕಾರಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪಾಂಡುರಂಗಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭವ್ಯ ಭಾರತ ಕಟ್ಟುವ ಮುಂಚೂಣಿ ನಾಯಕರೆಂದು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದರು.

ಪಕ್ಷದ ಕಾರ್ಯಕರ್ತರು, ಪದವೀಧರರಲ್ಲಿ ಅಭ್ಯರ್ಥಿ ಬಗ್ಗೆ ಗೊಂದಲ ಉಂಟು ಮಾಡುತ್ತಿರುವ ದೂರುಗಳು ಬಂದಿವೆ. ಇದಕ್ಕೆ ಯಾರೂ ಕಿವಿಗೊಡಬಾರದು. ವರಿಷ್ಠರ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ತಿಳಿಸಿದರು.

ಪಕ್ಷದ ಮುಖಂಡ ಚಿದಾನಂದ್ ಎಂ.ಗೌಡ ಮಾತನಾಡಿ, ತಾವು ಕೂಡ ಪರಿಷತ್ ಟಿಕೆಟ್ ಆಕಾಂಕ್ಷಿ ಎಂದರು.

ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಡಿ.ಎಂ.ಈಶ್ವರಪ್ಪ, ಪಿ.ಎಂ.ಚಂದ್ರಶೇಖರ್, ಟಿ.ರವಿಕುಮಾರ್, ಜಿಂಕ್ಲು ಬಸವರಾಜ್, ಜಗದೀಶ್, ಎಸ್.ನಾಗರಾಜ್, ಶ್ರೀರಾಮರೆಡ್ಡಿ, ಚಂದ್ರಶೇಖರ್ ಗೌಡ್ರು, ವಿಜಯ್, ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ವಿನಯ್, ವಸಂತಕುಮಾರ ಇತರರಿದ್ದರು.