ಜಿಲ್ಲೆ

ಡಿಜಿಟಲ್ ಮಾದರಿ ಗ್ರಾಮವನ್ನಾಗಿ ಬದಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯ ಎಲ್ಲ ಗ್ರಂಥಾಲಯಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಡಿಜಿಟಲ್ ಮಾದರಿ ಗ್ರಾಮವನ್ನಾಗಿ ಮಾಡುವ ಕಡೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಕಾವೇರಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಟೆಕ್ನಾಲಜಿಸ್ ಸಹಭಾಗಿತ್ವದಲ್ಲಿ ’ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ’ದಡಿ ಆಯ್ಕೆಯಾದ ಜಿಲ್ಲೆಯ 7 ತಾಲೂಕಿನ 22 ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಗುರುವಾರ ಡಿಜಿಟಲ್ ಮಾನಿಟರ್ ವಿತರಿಸಿ ಮಾತನಾಡಿದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಯಾವ ಗ್ರಂಥಾಲಯಗಳಲ್ಲಿ ಇಂಟರ್‌ನೆಟ್ ಮತ್ತು ವಿದ್ಯುತ್ ಸೌಲಭ್ಯವಿಲ್ಲವೋ ಅಂತಹ ಕಡೆ ಶೀಘ್ರವಾಗಿ ಮೂಲ ಸೌಕರ್ಯಗಳನ್ನು ನೀಡಬೇಕೆಂದು ಗ್ರಾಪಂ ಪಿಡಿಒಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ, ಮುಖ್ಯ ಗ್ರಂಥಾಲಯಾಧಿಕಾರಿ ಕೃಷ್ಣಮೂರ್ತಿ, ಶಿಕ್ಷಣ ಫೌಂಡೇಷನ್ ಜಿಲ್ಲಾ ಸಂಯೋಜಕ ಎಂ.ಪುಟ್ಟಮಾದಯ್ಯ ಸೇರಿದಂತೆ ಪಿಡಿಒ, ಗ್ರಂಥಾಲಯ ಮೇಲ್ವಿಚಾರಕರು ಹಾಜರಿದ್ದರು.