ಬೆಂಗಳೂರು: ಮುಂಗಾರು ಮಳೆ ಗುರುವಾರ ರಾಜ್ಯದ ಹಲವೆಡೆ ಚುರುಕಾಗಲಿದೆ. ಉಡುಪಿ, ದ.ಕನ್ನಡ, ಉ.ಕನ್ನಡದಲ್ಲಿ ಜೂ.12ರಿಂದ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಜೂ. 13ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡ, ಉಡುಪಿಯಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ 25 ಅಡಿ ಕೆಳಭಾಗಕ್ಕೆ ಉರುಳಿದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯದಲ್ಲೂ ಸಾಧಾರಣ ಮಳೆಯಾಗಿದೆ.