ಜಿಲ್ಲೆ

ಡಿ.1ರಂದು ಮೂಡಂಬೈಲು ಶಾಲೆ ಶತಮಾನೋತ್ಸವ

ಸೌಮ್ಯ ಆರ್

ಕಾಸರಗೋಡು: ಮಂಜೇಶ್ವರ ಸನಿಹದ ಮೂಡಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಶತಮಾನೋತ್ಸವ ಸಮಾರಂಭ ಡಿಸೆಂಬರ್ 1 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಪದ್ಮಶ್ರೀ ಹರೇಕಳ ಹಾಜಬ್ಬ ಸಮಾರಂಭ ಉದ್ಘಾಟಿಸುವರು. ಮೀಂಜ ಗ್ರಾಪಂ ಅಧ್ಯಕ್ಷೆ ಸುಂದರಿ ಆರ್.ಶೆಟ್ಟಿ ಅಧ್ಯಕ್ಷತೆ ವಹಿಸುವರು. ಡಾ.ರತ್ನಾಕರ ಮಲ್ಲಮೂಲೆ ಮುಖ್ಯ ಅತಿಥಿಗಳಾಗಿರುವರು. ಜಿಪಂ ಸದಸ್ಯೆ ಕಮಲಾಕ್ಷಿ ಕೆ.ಪಾವೂರು, ಮೀಂಜ ಗ್ರಾಪಂ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ಎಂ.ಎಲ್, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ, ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿ ರಾಜಗೋಪಾಲ, ಮಂಜೇಶ್ವರ ಬ್ಲಾಕ್ ಯೋಜನಾ ಸಂಯೋಜಕ ಜಾಯ್ ಜಿ, ಶಾಲಾ ಬೆಂಬಲ ಸಮಿತಿ ಅಧ್ಯಕ್ಷ ಶಿವರಾಮ ಪದಕಣ್ಣಾಯ ಶುಭಾಶಂಸಣೆಗೈಯಲಿರುವರು.