ಹೆಬ್ರಿ: ವಿದ್ಯಾರ್ಥಿಗಳು ಶಿಬಿರಗಳಲ್ಲಿ ಪಾಲ್ಗೊಂಡಾಗ ಹೆಚ್ಚು ಕ್ರಿಯಾಶೀಲರಾಗುತ್ತಾರೆ. ಸಹಜೀವನ ಮತ್ತು ಸಹಚಿಂತನೆ ಮೂಲಕ ಸಮಾಜದ ಭಾವನೆಗಳಿಗೆ ಸ್ಪಂದಿಸುವ ಕೆಲಸ ಶಿಬಿರದ ಮೂಲಕ ನೆರವೇರಬೇಕು ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ಮುದ್ರಾಡಿ ನೆಲ್ಲಿಕಟ್ಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ.ಎಸ್ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಜವಳಿ ವರ್ತಕರ ಸಂಘ ಅಧ್ಯಕ್ಷ ಯೋಗೀಶ್ ಭಟ್, ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ, ಸದಸ್ಯ ಗಣಪತಿ. ಎಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುನೀತಾ, ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ, ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ಬಾಲರಾಜ್ ಡಿಬಿ ವಂದಿಸಿದರು. ವಿಘ್ನೇಶ್ವರ ರಾವ್ ನಿರೂಪಿಸಿದರು.