ಜಿಲ್ಲೆ

ಕೇಂದ್ರದಿಂದ ಸ್ವದೇಶಿ ಉತ್ಪನ್ನಕ್ಕೆ ಹೆಚ್ಚು ಪ್ರೋತ್ಸಾಹ: ಛಲವಾದಿ ನಾರಾಯಣಸ್ವಾಮಿ ಹೇಳಿಕೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಸ್ವದೇಶಿ ಉತ್ಪನ್ನಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವಾಸ ಜಾಬ್ ಪೋರ್ಟಲ್ ಉದ್ಘಾಟಿಸಿ ಮಾತನಾಡಿದರು. ವೊಕಲ್ ಫಾರ್ ಲೋಕಲ್, ಗೋ ಗ್ಲೋಬಲ್ ಎಂಬ ಆಶಯಕ್ಕೆ ಅನುಗುಣವಾಗಿ ಭಾರತದ ಸ್ವದೇಶಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ವಿದ್ಯಾಥಿಗಳಿಗೆ ಮತ್ತು ಯುವಕರಿಗೆ ಅನುಕೂಲವಾಗುವಂತಹ ಎಕ್ಸಾಂ ಮಿತ್ರ ಮತ್ತು ಜಾಬ್ ಪೋರ್ಟಲ್‌ನ್ನು ಈ ಸಂಸ್ಥೆ ಆರಂಭಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿಶ್ವಾಸ್ ಮಾತನಾಡಿ, ದೇಶದ ಪ್ರತಿಯೊಬ್ಬರಿಗೂ ಡಿಜಿಟಲ್ ಶಕ್ತಿ ಮತ್ತು ಆತ್ಮನಿರ್ಭರತೆ ನೀಡುವ ಉದ್ದೇಶ ಹೊಂದಿದೆ. ಸ್ವದೇಶಿ ಆವಿಷ್ಕಾರವೂ ಜಾಗತಿಕ ಮಟ್ಟ ತಲುಪಬಹುದು ಎಂಬುದನ್ನು ನಾವು ಸಾಬೀತುಪಡಿಸುತ್ತಿದ್ದೇವೆ. ಈ ಮೂಲಕ ದೇಶದ ಡಿಜಿಟಲ್ ಕ್ರಾಂತಿಗೆ ಹೊಸ ಅಧ್ಯಾಯ ಬರೆದಿದ್ದೇವೆ. ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿಯೂ ಸಹ ಬದಲಾವಣೆಯತ್ತ ಹೆಜ್ಜೆ ಇಟ್ಟಿದೆ. ಎಕ್ಸಾಮ್ ಮಿತ್ರ ಮೂಲಕ ವಿದ್ಯಾರ್ಥಿಗಳಿಗೆ ಹಳೆಯ ಪ್ರಶ್ನೆಪತ್ರಿಕೆಗಳು ಮತ್ತು ಮಾದರಿ ಪರೀಕ್ಷೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.