ಜಿಲ್ಲೆ

ಸಮಾಜ ಸೇವಕರಿಗೆ ಹೆಚ್ಚಿನ ಪ್ರೋತ್ಸಾಹ

ಇಂದಿರಾ ಎನ್ ಕೆ

ಕುಂದಾಪುರ: ರೋಟರಿ ಸಂಸ್ಥೆಯ ಉದ್ದೇಶ ಸಾರ್ವಜನಿಕ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಸಹಾಯ ಮಾಡುವ ಯುವಕರನ್ನು ಹಾಗೂ ಸಮಾಜ ಸೇವಕರನ್ನು ಗೌರವಿಸಿ ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವುದಾಗಿದೆ ಎಂದು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಹೇರಿಕುದ್ರು ಹೇಳಿದರು.

ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್‌ನ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ಬಾರಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದ ಹಾಗೂ 30ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಮತ್ತು ತುರ್ತು ರಕ್ತ ನಿಧಿಯನ್ನು ಒದಗಿಸುವ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶರತ್ ಆನಗಳ್ಳಿ ಹಾಗೂ ಪ್ರಶಾಂತ್ ತಲ್ಲೂರು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೋಟರಿ ಮಾಜಿ ಅಧ್ಯಕ್ಷರು, ಮಾಜಿ ಕಾರ್ಯದರ್ಶಿಗಳು ಹಾಗೂ ರೋಟರಿ ಸದಸ್ಯರು ಹಾಗೂ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.