ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾಕೇಂದ್ರದ ನೂತನ ಕಟ್ಟಡವನ್ನು ಗಣೇಶ್ ಪ್ರಸಾದ್ ಉದ್ಘಾಟಿಸಿದರು. ರಾಮಲಿಂಗಯ್ಯ, ಎಚ್.ಎನ್.ಬಸವರಾಜು, ಮಹೇಶ, ಮಹದೇವಮ್ಮ, ಎ.ಎಂ.ಮಹೇಶ್ ಇದ್ದರು. 
ಜಿಲ್ಲೆ

ಬನ್ನಿತಾಳಪುರ ಅಭಿವೃದ್ಧಿಗೆ ಹೆಚ್ಚಿನ ಅನುದಾನ

ಅಭಿನಯ್ ಎಚ್.ಎಂ

ಗುಂಡ್ಲುಪೇಟೆ: ತಾಲೂಕಿನ ಬನ್ನಿತಾಳಪುರ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ನಿರ್ಮಿಸಿದ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಉದ್ಯೋಗ ದೊರಕಿಸಿ ಕೊಡಲು ಗ್ರಾಮಪಂಚಾಯಿತಿಗಳಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರಗಳು ಕಾರ್ಯಕ್ರಮ ಕೈಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಬನ್ನಿತಾಳಪುರದಲ್ಲಿಯೂ ಕೇಂದ್ರವನ್ನು ಉದ್ಘಾಟನೆ ಮಾಡಿ ಬಳಕೆಗೆ ತರಲಾಗುತ್ತಿದೆ. ಗ್ರಾಮದಲ್ಲಿ ಪಶುವೈದ್ಯ ಆಸ್ಪತ್ರೆ ಹಾಗೂ ಪಿಯುಸಿ ಕಾಲೇಜು ತೆರೆಯಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ತಾಲೂಕಿನ 60 ಸಾವಿರ ಮಹಿಳೆಯರಿಗೆ ಸರ್ಕಾರದ ಉಚಿತ ಭಾಗ್ಯಗಳು ತಲುಪಿವೆ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮಲಿಂಗಯ್ಯ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಬನ್ನಿತಾಳಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ, ಉಪಾಧ್ಯಕ್ಷೆ ಮಹದೇವಮ್ಮ, ಪಿಡಿಒ ಎ.ಎಂ.ಮಹೇಶ್, ಬಿಲ್ ಕಲೆಕ್ಟರ್ ಚಿಕ್ಕತುಪ್ಪೂರು ಮಲ್ಲು ಹಲವರು ಇದ್ದರು.