ಜಿಲ್ಲೆ

ರಾಜ್ಯದಲ್ಲಿ 10 ಸಾವಿರ ಗಡಿ ದಾಟಿದ ಡೆಂಘೆ ಪ್ರಕರಣಗಳು

ಪಂಕಜ ಕೆ.ಎಂ.

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 487 ಡೆಂಘೆ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಈವರೆಗೂ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 4,572 ಶಂಕಿತರ ಪರೀಕ್ಷೆ ನಡೆಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು 283, ಹಾಸನ 26, ತುಮಕೂರು 18, ವಿಜಯನಗರ 16, ಧಾರವಾಡ 17, ದಾವಣಗೆರೆ, ಹಾವೇರಿ, ಕಲಬುರಗಿ ಮತ್ತು ಉಡುಪಿಯಲ್ಲಿ ತಲಾ 12, ಚಿತ್ರದುರ್ಗ 10 ಸೇರಿ 487 ಹೊಸ ಡೆಂಘೆ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜ್ಯದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ10,449 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 358 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.