ಚಾಮರಾಜನಗರ: ಆಮ್ಲಜನಕ ಸಿಗದೇ ಉಸಿರಾಟದ ಸಮಸ್ಯೆ ಉಂಟಾಗಿ 20ಕ್ಕೂ ಹೆಚ್ಚು ಕರೊನಾ ರೋಗಿಗಳು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ 16 ಮಂದಿ ಮತ್ತು ಇಂದು ಬೆಳಗಿನ ಜಾವ 4ಕ್ಕೂ ಹೆಚ್ಚು ಜನರು ಆಕ್ಸಿಜನ್ ಸಿಗದೆ ನರಳಾಡಿ ಪ್ರಾಣಬಿಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ಗಳು ಬರುವಷ್ಟರಲ್ಲಿ ಕರೊನಾ ರೋಗಿಗಳ ಕೊನೆಯುಸಿರೆಳೆದಿದ್ದಾರೆ.
ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಮುಂದೆ ದೌಡಾಯಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಸ್ಪತ್ರೆಯ ಮುಂಭಾಗ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.