ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ 50:50ರ ಅನುಪಾತದ ನಿವೇಶನಗಳ ಹಂಚಿಕೆ ಸಂಬಂಧಿಸಿದ ನೂರಾರಕ್ಕೂ ಹೆಚ್ಚು ಕಡತಗಳು ನಾಪತ್ತೆ ಆಗಿವೆ ಎನ್ನಲಾಗಿದೆ.
ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಸೋಮವಾರವೂ ತನಿಖೆ ಮುಂದುವರಿಸಿದ್ದಾರೆ. ಪ್ರಾಧಿಕಾರದಲ್ಲಿನ 50:50ರ ಅನುಪಾತ, ಬದಲಿ ನಿವೇಶನ ಹಂಚಿಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ. ಮುಡಾದ ಬಹುತೇಕ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ 50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆ ಸಂಬಂಧಿಸಿದ ಅನೇಕ ಕಡತಗಳು ನಾಪತ್ತೆ ಆಗಿವೆ. ಜತೆಗೆ ಕೆಲ ಕಡತಗಳಲ್ಲಿ ಪ್ರಮುಖ ಪುಟಗಳು ನಾಪತ್ತೆ ಆಗಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.