ಜಿಲ್ಲೆ

ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ಕೌಂಟರ್?

ಹೆಬ್ರಿ: ಹೆಬ್ರಿ ಸಮೀಪದ ಕಬ್ಬಿನಾಲೆ ಪೀತು ಬೈಲು ಎಂಬಲ್ಲಿ ತಡವರಾತ್ರಿ ಮೋಸ್ಟ ವಾಂಟೆಡ್ ನಕ್ಸಲ್ ವಿಕ್ರಂ ಗೌಡನ ಎನ್ಕೌಂಟರ್ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಎಎನ್ಎಫ್ ನವರು ಕೂಬಿಂಗ್ ನಡೆಸುತ್ತಿರುವ ವೇಳೆ ನಕ್ಸಲರ ತಂಡ ಮುಖಾಮುಖಿಯಾಗಿ ಗುಂಡಿನ ಚಕಮಕಿ ನಡೆದಾಗ ವಿಕ್ರಂ ಗೌಡ ಹತನಾಗಿದ್ದಾನೆ.

ನಕ್ಸಲ್ ಗುಂಪಿನಲ್ಲಿದ್ದವರು ಕಾಲ್ಕಿತ್ತಿದ್ದು ಅವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹತನಾದ ವಿಕ್ರಂ ಗೌಡ ಕಬ್ಬಿನಾಲೆಯವನಾಗಿದ್ದು ಅನೇಕ ಕೇಸುಗಳಲ್ಲಿ ಪೊಲೀಸರಿಗೆ ಬೇಕವನ್ನಾಗಿದ್ದ. ಕಳೆದ ವಾರ ಈದು ಪರಿಸರದಲ್ಲಿ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ಇದ್ದ ಹಿನ್ನೆಲೆಯಲ್ಲಿ, ಹೆಬ್ರಿ ಭಾಗದಲ್ಲಿ ನಿರಂತರವಾಗಿ ಕೂಬಿ ನಡೆಯುತ್ತಿತ್ತು. ನಕ್ಷಲರ ತಂಡ ರೇಷನ್ ಸಂಗ್ರಹಿಸಲು ಸ್ಥಳೀಯವಾಗಿ ಬರುತ್ತಿರುವಾಗ ಘಟನೆ ನಡೆದಿದೆ.

*ಅಲ್ಲಲ್ಲ ನಕ್ಸಲ್‌ ವಿರೋಧಿ ಕಾರ್ಯಾಚರಣೆ*

ಕಬ್ಬಿನಾಲೆ ಗ್ರಾಮದ ಸೀತಂಬೈಲು ಎಂಬಲ್ಲಿ ಸೋಮವಾರ ರಾತ್ರಿ ನಕ್ಸಲ್ ಕೂಂಬಿಂಗ್ ಕಾರ್ಯಾಚರಣೆ ನಡೆದಿತ್ತು. ಈ ವೇಳೆ, ಗುಂಡಿನ ಕಾಳಗದಲ್ಲಿ ನಕ್ಸಲ್‌ ಮುಖಂಡ ವಿಕ್ರಂ ಗೌಡ ಎಂಟರ್ ಆಗಿದೆ. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಒಂಟಿ ಮನೆಗೆ ಹಾಗೂ ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೂ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಚರ್ಚಿಸಿದ್ದಾರೆ. ಕಳೆದ ಸೆಪ್ಟೆಂಬ‌ರ್ ತಿಂಗಳಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಮತ್ತು ಆತನ ಜೊತೆಗಿದ್ದ ಆರು ಮಂದಿ ಪೊಲೀಸರಿಗೆ ಶರಣಾಗಿ ಸಮಾಜದ ಮುಖ್ಯ ವಾಹಿನಿಗೆ ಬರಲಿದ್ದಾರೆಂಬ ವದಂತಿ ಹರಡಿತ್ತು. ಕೇಂದ್ರ ಸರ್ಕಾರದ ಸೂಚನೆಯಂತೆ ಕೇರಳ, ಛತ್ತೀಸಢ, ಆಂಧ್ರದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆ ತೀವ್ರಗೊಂಡಿದ್ದು ಮತ್ತು ಕಾಡಿನಂಚಿನ ಗ್ರಾಮಗಳಲ್ಲೂ ಬೆಂಬಲ ಸಿಗದೇ ಇದ್ದುದು ಇವರಿಗೆ ಅಳಿವು ಉಳಿವಿನ ಪ್ರಶ್ನೆಯಾಗಿತ್ತು. ಇತ್ತೀಚೆಗೆ ಈದು, ಅದಕ್ಕೂ ಮೊದಲು ಸುಬ್ರಹ್ಮಣ್ಯ ಬಳಿಯ ಕೂಜಿಮಲೆ ಬಳಿ ನಕ್ಸಲರು ಕಾಣಿಸಿಕೊಂಡಿದ್ದರು. ಆದರೆ ಎಎನ್‌ಎಫ್ ಕೂಂಬಿಂಗ್ ನಡೆಸಿದರೂ ಅವರ ಕಣ್ಣಿಗೆ ಬಿದ್ದಿರಲಿಲ್ಲ.

*ನಕ್ಸಲರಿಗೆ ಮುಖಂಡನಾಗಿದ್ದ ವಿಕ್ರಂ ಗೌಡ*

ಕ್ರಂ ಗೌಡ ಕಳೆದ 10 ವರ್ಷಗಳಲ್ಲಿ ಪಶ್ಚಿಮ ಘಟ್ಟದ ನಕ್ಸಲರಿಗೆ ಮುಖಂಡನಾಗಿದ್ದ. 2012 ರಲ್ಲಿ ಕರ್ನಾಟಕ ಭಾಗದಲ್ಲಿ ನಕ್ಸಲ್ ಕಾರ್ಯಾಚರಣೆ ತೀವ್ರಗೊಂಡ ಬಳಿಕ ಕೇರಳದತ್ತ ಪರಾರಿಯಾಗಿದ್ದರು. ಕಳೆದ ವರ್ಷ ವಯನಾಡು ಸೇರಿದಂತೆ ಕೇರಳದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಲಾಗಿತ್ತು. ಆನಂತರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ನಕ್ಸಲರು ಕಾಣಿಸಿದ್ದರು.

*ವಿಕ್ರಂ ಗೌಡ ಎನ್ಕೌಂಟರ್*

ನಕ್ಸಲ್ ಕಾರ್ಯಾಚರಣೆಯಲ್ಲಿ ಮೃತಪಟ್ಟ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಅಥನಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಐದಾರು ನಕ್ಸಲ್ ತಂಡದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಇನ್ಕೌಂಟರ್ ಮುನ್ನ ಶರಣಾಗುವಂತೆ ಪೊಲೀಸರು ನಕ್ಸಲರಿಗೆ ವಾರ್ನಿಂಗ್ ನೀಡಿದ್ದರು, ಈ ವೇಳೆ ಏಕಾಏಕಿ ಗುಂಡಿನ ದಾಳಿ ನಡೆಸಿದ ನಕ್ಸಲರ ವಿರುದ್ಧ ಪೊಲೀಸರು ಪ್ರತಿ ದಾಳಿ ನಡೆಸಿದ್ದರು. ಪೊಲೀಸರ ಪ್ರತಿ ದಾಳಿಗೆ ಒಂದಿಬ್ಬರು ನಕ್ಸಲರು ಪರಾರಿಯಾಗಿದ್ದು ಸ್ಥಳದಲ್ಲಿ ಸಿಕ್ಕ ಮೃತ ದೇಹ ವಿಕ್ರಂ ಗೌಡರದ್ದೇ ಎಂದು ಪೊಲೀಸರು ದೃಢಪಡಿಸಿದ್ದಾರೆ.