ಜಿಲ್ಲೆ

17 ಸಲ ಎಸ್ಕೇಪ್ ಆಗಿದ್ದವ ಮತ್ತೆ ಸಿಕ್ಕಿಬಿದ್ದ; 80ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ; ಇವನ ಹೆಸರೇ...

Webdesk - Ravikanth

ಬೆಂಗಳೂರು: ಹದಿನೇಳು ಸಲ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಖತರ್ನಾಕ್​ ಕಳ್ಳನೊಬ್ಬ ಮತ್ತೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕುಖ್ಯಾತ ಕಳ್ಳ ಕಾರ್ತಿಕ್​ ಬಂಧಿತ ವ್ಯಕ್ತಿ. ಮತ್ತೆ ಮತ್ತೆ ಹೇಗಾದರೂ ತಪ್ಪಿಸಿಕೊಳ್ಳುತ್ತಿದ್ದ ಈತ ಎಸ್ಕೇಪ್ ಕಾರ್ತಿಕ್ ಎಂದೇ ಕರೆಸಿಕೊಳ್ಳುತ್ತಿದ್ದ. 2008 ಹಾಗೂ 2010ರಲ್ಲಿ ಪೊಲೀಸರ ಕಸ್ಟಡಿಯಿಂದ ಎಸ್ಕೇಪ್ ಆಗಿದ್ದ ಆರೋಪಿ, ತಲೆಮರೆಸಿಕೊಂಡಿದ್ದ.

17 ಸಲ ತಪ್ಪಿಸಿಕೊಂಡಿದ್ದ ಈತ 80ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಈತ ಬೆಂಗಳೂರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ. ಇದೀಗ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಕೇಪ್ ಕಾರ್ತಿಕ್ ಬಂಧಿತನಾಗಿದ್ದಾನೆ. ಆರೋಪಿಯಿಂದ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.