ಸಾಂದರ್ಭಿಕ ಚಿತ್ರ 
ಜಿಲ್ಲೆ

ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವು; ಬದುಕುಳಿದ ಮಗನಿಗೆ ಮತ್ತೊಂದು ಶಾಕ್!

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿಯನ್ನು ಕೇಳಿ ತಾಯಿ ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಖನಗಾವಿಯ ಕೆ.ಎಚ್. ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಬೆಳಗಾವಿ ಜಾಧವ್ ನಗರದಲ್ಲಿ ಇಂದು ಮಧ್ಯಾಹ್ನ ಕಟ್ಟಡದ ಕೆಲಸದಲ್ಲಿ ತೊಡಗಿದ್ದ ಸಿದ್ದರಾಯಿ ಮಿರಜಕರ್​ ಎಂಬಾತನ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಇದರಿಂದ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದ ಸಿದ್ದರಾಯಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚಿರತೆ ದಾಳಿಯ ಆಘಾತದಿಂದ ಚೇತರಿಸಿಕೊಂಡು ಮನೆಗೆ ಮರಳಿದ ಸಿದ್ದರಾಯಿಗೆ ಮತ್ತೊಂದು ಆಘಾತ ಎದುರಾಗಿತ್ತು. ಏಕೆಂದರೆ ಅಷ್ಟರಲ್ಲಾಗಲೇ ಮಗ ಸಿದ್ದರಾಯಿ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿದ ತಾಯಿ ತಾಯಿ ಶಾಂತಾ ಮಿರಜಕರ್ (65) ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.