ಜಿಲ್ಲೆ

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಬೆಳಗಾವಿ: ಮಕ್ಕಳಿಬ್ಬರೊಂದಿಗೆ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕರುಣಾಜನಕ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರ ಬಳಿಯ ಕೆರೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯ ಸಹ್ಯಾದ್ರಿ ನಗರದ ಕೃಷಾ (36), ಭಾವಿರಾ (4) ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬ ಮಗ ವೀರನ್​ಗಾಗಿ ನೀರಿನಲ್ಲಿ ಹುಡುಕಾಟ ನಡೆಯುತ್ತಿದೆ.

ಮೃತರಾದವರ ಕುರಿತ ಹೆಚ್ಚಿನ ವಿವರ ಹಾಗೂ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.