ಜಿಲ್ಲೆ

ಮಾತೃಭಾಷೆಗೆ ಸಿಗಲಿ ಪ್ರಾಧಾನ್ಯ

Avinash R

ಬಂಟ್ವಾಳ: ಕನ್ನಡ ಭಾಷೆ, ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರಿಗೂ ಇದೆ. ಭಾರತೀಯ ಭಾಷೆಗಳು ಶ್ರೀಮಂತವಾಗಿದ್ದು ಮಾತೃಭಾಷೆಗೆ ಹೆಚ್ಚಿನ ಪ್ರಾಧಾನ್ಯ ಸಿಗಬೇಕು ಎಂದು ಮಂಗಳೂರಿನ ಲೆಕ್ಕಪರಿಶೋಧಕ ಸಿ.ಎ.ಶಾಂತಾರಾಮ ಶೆಟ್ಟಿ ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ವತಿಯಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸಂಘಟಿಸಲಾದ ರಾಜ್ಯದ ಕನ್ನಡ ಶಾಲೆಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಭಾಸಾಪ ಕರ್ನಾಟಕ ರಾಜ್ಯ ಸಂಪರ್ಕ ಪ್ರಮುಖ್ ಡಾ.ವಿ.ರಂಗನಾಥ ಮೈಸೂರು ದಿಕ್ಸೂಚಿ ಭಾಷಣ ಮಾಡಿದರು. ಬಳಿಕ ಚಿಂತನ ವಿಚಾರಗೋಷ್ಠಿಯಲ್ಲಿ, ಕನ್ನಡ ಶಾಲೆಗಳ ಸವಾಲು ಮತ್ತು ಸಮಾಧಾನಗಳು ಎಂಬ ವಿಷಯದ ಕುರಿತು ಶಿಕ್ಷಣ ತಜ್ಞ ರಾಜಾರಾಮ ವಿಚಾರ ಮಂಡಿಸಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಶಾಲೆಗಳನ್ನು ಗೌರವಿಸಿದರು. ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ ರೈ ಸ್ವಾಗತಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ನಾರಾಯಾಣ ಶೇವಿರೆ, ರಾಜ್ಯ ಕಾರ್ಯದರ್ಶಿ ಶೈಲೇಶ್ ಮಂಗಳೂರು, ವಿಭಾಗ ಸಂಯೋಜಕ ಸುಂದರ ಇಳಂತಿಲ ಉಪಸ್ಥಿತರಿದ್ದರು.

ತಾಲೂಕು ಅಧ್ಯಕ್ಷ ರಾಜಮಣಿ ರಾಮಕುಂಜ ಸ್ವಾಗತಿಸಿದರು. ಕಾರ್ಯದರ್ಶಿ ಮಧುರಾ ಕಡ್ಯ ವಂದಿಸಿದರು. ಉಪನ್ಯಾಸಕರಾದ ಅಶೋಕ ಕಲ್ಯಾಟೆ, ಡಾ.ಮೀನಾಕ್ಷಿ ರಾಮಚಂದ್ರ ನಿರೂಪಿಸಿದರು. ವಿದ್ಯಾಶ್ರೀ ಕಡೂರು, ಡಾ.ಕವಿತಾ, ಜಯಾನಂದ ಪೆರಾಜೆ ಸಹಕರಿಸಿದರು.

ಸನ್ಮಾನಗೊಂಡ ಶಾಲೆಗಳು

ಜ್ಞಾನ ಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆ ಶಹಾಪುರ ಯಾದಗಿರಿ, ಜೈಹಿಂದ್ ಪ್ರೌಢಶಾಲೆ ಅಂಕೋಲಾ, ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರ ಉಡುಪಿ, ವನಿತಾ ಸದನ ಮೈಸೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಶಾಲೆಗಳನ್ನು ಗೌರವಿಸಲಾಯಿತು.

ಇಂದಿನ ಶಿಕ್ಷಣ ಹಣ ಆಧಾರಿತವಾಗಿದೆ. ಗುಣ ಆಧಾರಿತ ಶಿಕ್ಷಣ ಅವಶ್ಯಕತೆ. ಶ್ರೀರಾಮನೇ ಈ ದೇಶಕ್ಕೆ ಆದರ್ಶವಾಗಿದ್ದು ಒಳ್ಳೆಯದರ ಕಡೆಗೆ ಹೋಗುವುದೇ ಭಾರತೀಯತೆ. ಕನ್ನಡ ಭಾಷೆ ಬೆಳೆಸಿದರೆ ಜಗತ್ತಿನ ಭಾಷೆಗಳಗೆ ಶಕ್ತಿ ನೀಡಿದಂತಾಗುತ್ತದೆ.

- ಡಾ.ಪ್ರಭಾಕರ ಭಟ್ ಕಲ್ಲಡ್ಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ