ಹನೂರು: ತಾಲೂಕಿನ ಅಂಬಿಕಾಪುರ ಗ್ರಾಮದ ಬಳಿ ಶುಕ್ರವಾರ ಬೈಕ್‌ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ.
ತಾಲೂಕಿನ ಅಜ್ಜೀಪುರ ಗ್ರಾಮದ ಸುನಿತಾ (41), ಮಕ್ಕಳಾದ ಅನನ್ಯಾ (15) ಹಾಗೂ ಚಿರಾಗ್ (10) ಗಾಯಗೊಂಡವರು.
ಈ ಮೂವರು ಕಾರ್ಯನಿಮಿತ್ತ ರಾಮಾಪುರ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳಿದ್ದು, ಬೆಳಗ್ಗೆ 10ರ ವೇಳೆಯಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅಂಬಿಕಾಪುರ ಗ್ರಾಮದ ಬಳಿ ನಾಯಿ ಅಡ್ಡ ಬಂದಿದ್ದು, ನಿಯಂತ್ರಿಸಲು ಸಾಧ್ಯವಾಗದೆ ಬೈಕ್ ನೆಲಕ್ಕುರುಳಿದೆ. ಪರಿಣಾಮ ಮೂವರೂ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ತುರ್ತು ವಾಹನದ ಮೂಲಕ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟರು.
ಡಾ.ಪುಷ್ಪರಾಣಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.