ಕುಂದಾಪುರ: ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಹಾಗೂ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಆಯೋಜಿಸಿದ್ದ ಜಿಲ್ಲಾಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮೊಜಮ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜ್ಞಾನ ವಿಭಾಗದ ಅನೂಪ್ ಗಾಣಿಗ ಹಾಗೂ ಶುಭಾ ಇಂಡಿ ದ್ವಿತೀಯ ಸ್ಥಾನಗಳಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಮೊಜಮ್ ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿಂ ಅಬ್ದುಲ್ ಮುಬಿನ್ ಹಾಗೂ ತಸ್ಮಿಯಾ ದಂಪತಿ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.