ಹೆಮ್ಮಾಡಿಯಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಗೌರವಿಸಲಾಯಿತು 
ಜಿಲ್ಲೆ

ಅಪ್ರಪ್ರಚಾರಕ್ಕೆ ಮಣೆ ಹಾಕದ ಮತದಾರ : ಸಂಸದ ಬಿ.ವೈ.ರಾಘವೇಂದ್ರ

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ, ಅಪ್ರಚಾರಗಳಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾರರು ಮಣೆ ಹಾಕಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಹೆಮ್ಮಾಡಿಯಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಶುಕ್ರವಾರ ಅಭಿನಂದನಾ ಸಮಾರಂಭ ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಶುಕ್ರವಾರ ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ, ಉಮೇಶ ಶೆಟ್ಟಿ, ಎಂಟು ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರನ್ನು ಗೌರವಿಸಲಾಯಿತು. ಅಗ್ನಿವೀರ್‌ಗೆ ಆಯ್ಕೆಯಾದ ಅಕ್ಷಯ್ ದೇವಾಡಿಗ ಅವರನ್ನು ಅಭಿನಂದಿಸಲಾಯಿತು.

ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾಡೂರು ಸುರೇಶ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಕ್ಷೇತ್ರದ ಬಿಜೆಪಿ ಮುಖಂಡರಾದ ಶಿವರಾಜ್ ಪೂಜಾರಿ, ಗಜೇಂದ್ರ, ಅಶೋಕ ಎನ್.ಡಿ., ಶ್ಯಾಮಲಾ ಕುಂದರ್, ರಾಮ ನಾಯ್ಕ, ಅಂತೋಣಿ, ರವೀಂದ್ರ ಖಾರ್ವಿ ಹೊಸಪೇಟೆ ಉಪಸ್ಥಿತರಿದ್ದರು. ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಪೂಜಾರಿ ಸ್ವಾಗತಿಸಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಉಮೇಶ ಶೆಟ್ಟಿ ವಂದಿಸಿದರು.

ಕೊಲ್ಲೂರಿನಲ್ಲಿ ಕೇಬಲ್ ಕಾರ್ ಯೋಜನೆಗೆ 60 ಎಕರೆ ಜಾಗ ನೀಡಬೇಕಿದ್ದು, ಈ ಬಗ್ಗೆ ಪ್ರವಾಸೋದ್ಯಮ ಸಚಿವರ ಜತೆ ಸಂಪರ್ಕದಲ್ಲಿದ್ದೇನೆ. ಕರಾವಳಿ ಪ್ರದೇಶಕ್ಕೆ ಪ್ರವಾಸೋದ್ಯಮ ಕೇಂದ್ರ ಮಾಡುವ ಪ್ರಯತ್ನ ನಡೆಯುತ್ತಿದೆ. ಗಂಗೊಳ್ಳಿ- ಕುಂದಾಪುರ ಸೇತುವೆ ನಿರ್ಮಾಣ ಬಗ್ಗೆ ಶಾಸಕರೊಂದಿಗೆ ದೆಹಲಿಗೆ ತೆರಳಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ ನಡೆಸಿ ವಿಶೇಷ ಅನುದಾನದಲ್ಲಿ ನಿರ್ಮಿಸಲು ಪ್ರಯತ್ನಿಸಲಾಗುವುದು.-ಬಿ.ವೈ.ರಾಘವೇಂದ್ರ, ಸಂಸದ