ಜಿಲ್ಲೆ

ಜಿಎಸ್‌ಬಿ ಸೇವಾ ಮಂಡಲದ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಬ್ರಿಜೇಶ್ ಚೌಟ

Mangaluru - Hariprasad Rai


ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮುಂಬೈ ಮಹಾನಗರದ ಕಿಂಗ್ಸ್ ಸರ್ಕಲ್ ಸಮೀಪ ಪೂಜಿಸಲ್ಪಡುವ ಜಿಎಸ್‌ಬಿ ಸೇವಾ ಮಂಡಲದ ಶ್ರೀ ಗಣೇಶನ ದರ್ಶನ ಪಡೆದರು. ಬಳಿಕ ಮುಂಬೈನ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ ನೀಡಿ ಮಾಧವೇಂದ್ರ ತೀರ್ಥ ಸ್ವಾಮೀಜಿಯವರ ಬೃಂದಾವನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚಾತುರ್ಮಾಸ ವ್ರತದಲ್ಲಿರುವ
ಕಾಶಿ ಮಠದ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಜತೆಗಿದ್ದರು.