ಜಿಲ್ಲೆ

ಆಹಾರ ಸಂಸ್ಕರಣಾ ಹಬ್ ಸ್ಥಾಪನೆಗೆ ಸಂಸದ ಕ್ಯಾ. ಚೌಟ ಮನವಿ

Mangaluru - Hariprasad Rai


ಮಂಗಳೂರು : ಅಡಕೆ, ತೆಂಗು ಸಹಿತ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(ಎನ್‌ಐಎಫ್‌ಟಿಇಎಂ) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಸಂಸದರನ್ನು ಭೇಟಿಯಾದ ಸಚಿವರು ದಕ್ಷಿಣ ಕನ್ನಡದಲ್ಲಿ ಆಹಾರ ಸಂಸ್ಕರಣಾ ಉದ್ಯಮ ಸ್ಥಾಪನೆಗೆ ಪೂರಕವಾಗಿರುವ ಅವಕಾಶಗಳ ಬಗ್ಗೆ ತಿಳಿಸಿದರು.
ಜಿಲ್ಲೆಯಲ್ಲಿ ಎನ್‌ಐಎಫ್‌ಟಿಇಎಂ ಸಂಯೋಜಿತ ಸೆಂಟರ್ ಸ್ಥಾಪಿಸುವುದರಿಂದ ಆಹಾರ ಸಂಸ್ಕರಣಾ ತಂತ್ರಜ್ಞಾನಗಳ ಬಗ್ಗೆ ಇಲ್ಲಿನ ರೈತರು ಹಾಗೂ ಉದ್ದಿಮೆದಾರರಿಗೆ ಮಾಹಿತಿ, ಕೌಶಲಅಭಿವೃದ್ಧಿಗೆ ಅನುಕೂಲವಾಗಲಿದೆ. ಜತೆಗೆ ಸ್ಥಳೀಯ ಈ ವಲಯದ ಉದ್ದಿಮೆದಾರರು, ಮೀನು ಸಂಸ್ಕರಣಾ ವಲಯದವರು ಹಾಗೂ ರೈತರಿಗೆ ಎನ್‌ಐಎಫ್‌ಟಿಇಎಂ ಸಹಯೋಗದಲ್ಲಿ ಅಗತ್ಯ ಮಾಹಿತಿ ವಿನಿಮಯ ಕಾರ್ಯಕ್ರಮ ಕೊಳ್ಳಲು ನೆರವಾಗಲಿದೆ ಎಂದು ಕ್ಯಾ.ಚೌಟ ತಿಳಿಸಿದರು.