ಮಂಗಳೂರು : ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯವನ್ನು ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ.
ಹಸುವಿನ ಕೆಚ್ಚಲು ಕತ್ತರಿಸಿರುವುದು ಹೆತ್ತ ತಾಯಿಯ ಕತ್ತು ಕೊಯ್ಯುವುದು ಒಂದೇ . ಕೃತ್ಯ ಎಸಗಿದ ಆರೋಪಿಗೆ ಮಾನಸಿಕವಾಗಿ ಅಸ್ವಸ್ಥ ಪಟ್ಟ ಕಟ್ಟಿ ಪ್ರಕರಣವನ್ನು ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಲು ಹೊರಟಿರುವ ಮೂಲಕ ಜಿಹಾದಿ ಮಾನಸಿಕತೆಯನ್ನು ಪೋಷಿಸಿ ಬೆಳೆಸುತ್ತಿರುವುದು ಆತಂಕದ ಸಂಗತಿ ಎಂದು ಅವರು ಹೇಳಿದ್ದಾರೆ.
ಗೋವು ಎನ್ನುವುದು ಸನಾತನ ಧರ್ಮಿಯರಿಗೆ ಮಾತೃ ಸ್ವರೂಪಿಣಿಯಾಗಿದೆ. . ಜಾತಿ, ಮತ, ಧರ್ಮ ಬೇಧವಿಲ್ಲದೇ ಕ್ಷೀರಧಾರೆಯನ್ನು ಹರಿಸುವ ಗೋಮಾತೆಯ ಕೆಚ್ಚಲು ಕತ್ತರಿಸುತ್ತಾರೆಂದರೆ ಎಂಥ ವಿಕೃತ ಮನಸ್ಥಿತಿಯಿರಬಹುದು. ನಾಗರಿಕ ಸಮಾಜ ತಲೆತಗ್ಗಿಸುವ ಅಸಹ್ಯ ಮನಸ್ಥಿತಿಯ ಆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಅವೆರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಕೆಎಫ್‌ಡಿ, ಪಿಎಫ್‌ಐನಂತಹ ದೇಶದ್ರೋಹಿ ಸಂಘಟನೆ ವಿರುದ್ದ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಜಿಹಾದಿ ಮಾನಸಿಕತೆಯನ್ನು ಬೆಳೆಸಿ ಪೋಷಿಸಿದ ಪ್ರತಿಫಲವಿದು. ಒಂದೆಡೆ ಕಾಂಗ್ರೆಸ್ ಮುಸ್ಲಿಂ ತುಷ್ಟೀಕರಣ ಮಿತಿಮೀರಿದ ಹಿನ್ನೆಲೆ ನಿರಂತರ ಗೋಹತ್ಯೆ ಆಗುತ್ತಿದೆ. ಸರ್ಕಾರಕ್ಕೆ ಕಿಂಚಿತ್ತಾದರೂ ಗೋಮಾತೆಯ ಮೇಲೆ ಗೌರವವಿದ್ದರೆ ಈ ರಾಕ್ಷಸಿ ಕೃತ್ಯದ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕ್ಯಾ. ಚೌಟ ಒತ್ತಾಯಿಸಿದ್ದಾರೆ.