ಕಾರವಾರ: ಉತ್ತರ ಕನ್ನಡ ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದೆ.
ಕುಮಟಾದ ಎ.ವಿ.ಬಾಳಿಗಾ ಕಾಲೇಜ್ ನ ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ಬೆಳಗ್ಗೆ 7.30 ಗಂಟೆಗೆ ಸರಿಯಾಗಿ ಪೋಸ್ಟಲ್ ಬ್ಯಾಲೆಟ್ ಎಣಿಕೆ ಪ್ರಾರಂಭವಾಯಿತು.
ನಂತರ ಒಂದೊಂದಾಗಿ ಇವಿಎಂ ಇಟ್ಟಿರುವ ಸ್ಟ್ರಾಂಗ್ ರೂಂ ತೆರೆಯಲಾಯಿತು. ಒಟ್ಟು 23 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
13 ಅಭ್ಯರ್ಥಿಗಳು
ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ.
ಮಳೆಯಿಂದ ಅಡಚಣೆ
ಕುಮಟಾದಲ್ಲಿ ಮಳೆ ಸುರಿಯುತ್ತಿದ್ದು, ಮತ ಎಣಿಕೆಗೆ ಬರುವ ಅಧಿಕಾರಿ, ಸಿಬ್ಬಂದಿಗೆ ಅಡಚಣೆಯಾಯಿತು. ಮಳೆಯಲ್ಲಿ ಸಾಲಿನಲ್ಲಿ ನಿಂತು ಎಣಿಕೆ ಕೇಂದ್ರ ಪ್ರವೇಶಿಸಲಾಯಿತು