ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರನ್ನು ಗುರುವಾರ ಭೇಟಿ ಮಾಡಿ, ಕುಮಟಾ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ ಫಾರಂ ನಿರ್ವಿುಸಬೇಕು ಹಾಗೂ ಪ್ಲಾಟ್ ಫಾರಂ ಅನ್ನು ಮತ್ತಷ್ಟು ಎತ್ತರಕ್ಕೆ ಏರಿಸುವ ಕುರಿತು ಚರ್ಚೆ ನಡೆಸಿದರು.
ಇದೇ ವೇಳೆ ಬೆಂಗಳೂರು ಮುರ್ಡೆಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ, ಕಾಚಿಗುಡ ಎಕ್ಸ್ಪ್ರೆಸ್ ರೈಲನ್ನು ಮುರ್ಡೆಶ್ವರದಿಂದ ಕಾರವಾರದವರೆಗೆ ವಿಸ್ತರಿಸಬೇಕು ಹಾಗೂ ಖಾನಾಪುರ ರೈಲ್ವೆ ನಿಲ್ದಾಣದ ಅಭಿವೃದ್ಧಿ ಮತ್ತು ಕೆಳ ಸೇತುವೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಮನವಿಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದ್ದಾರೆ.