ವಿಜಯವಾಣಿ ಸುದ್ದಿಜಾಲ ಉಡುಪಿ
ನೇಕಾರಿಕೆಗೆ ತೊಡಕಾಗಿರುವ ಸಮಸ್ಯೆ ನಿವಾರಣೆಗೆ ಹಾಗೂ ಅಭಿವೃದ್ಧಿ ಕುರಿತಂತೆ ಕೇಂದ್ರ ಸರ್ಕಾರದಿಂದ ದೊರಕಬಹುದಾದ ಯೋಜನೆಗಳಿಗೆ ಶಿಫಾರಸು ಮಾಡುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ಉಡುಪಿಯಲ್ಲಿರುವ ಉಡುಪಿ ಜಿಲ್ಲಾ ಕೈಮಗ್ಗ ಮತ್ತು ನೇಕಾರರ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಸಂಬಂಧಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ನೇಕಾರರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ಹಾಗೂ ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಸಂಚರಿಸಲು ಉಚಿತವಾಗಿ ಬಸ್ ಸಂಚಾರದ ವ್ಯವಸ್ಥೆ ಕಲ್ಪಿಸುವಂತೆ ಸಂಸದ ಕೋಟ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ ಶೆಟ್ಟಿ, ಕೈಮಗ್ಗ ನೇಕಾರರ ಸಂಘದ ಅಧ್ಯಕ್ಷ ರತ್ನಾಕರ ಇಂದ್ರಾಳಿ, ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಕೌಶಲಾಭಿವೃದ್ಧಿ ಇಲಾಖೆಯ ಅಧಿಕಾರಿ ಬಿ.ಅರುಣಕುಮಾರ್ ಇದ್ದರು.