ತಿ.ನರಸೀಪುರ: ಪಟ್ಟಣದ ಚಿಕ್ಕಮ್ಮತಾಯಿ ಯಾತ್ರಿ ಭವನದಲ್ಲಿ ಜು.19ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ ಅವರು ಜನ ಸಂಪರ್ಕ ಸಭೆ ನಡೆಸಲಿದ್ದಾರೆ.
ನರಸೀಪುರ ವಿಧಾನಸಭಾ ಕ್ಷೇತ್ರದ ಜನ ಸಾಮಾನ್ಯರ ಕುಂದು-ಕೊರತೆಗಳನ್ನು ಆಲಿಸಲು ಸಂಸದರು ಆಗಮಿಸುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಬ್ಲಾಕ್ ಅಧ್ಯಕ್ಷರಾದ ಎಂ.ಡಿ.ಬಸವರಾಜು ಹಾಗೂ ಚೆನ್ನಕೇಶವ ಅವರು ಉಪಸ್ಥಿತರಿರುವರು. ಸಭೆಗೆ ಸಾರ್ವಜನಿಕರು ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆಗಮಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆಪ್ತ ಸಹಾಯಕ ಬಿ.ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.