ಬಿಜೆಪಿ ಅಧ್ಯಕ್ಷ ಸ್ಥಾನ ಯತ್ನಾಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ |ಗೊಂದಲಕ್ಕೆ ಶೀಘ್ರ ತೆರೆ
ವಿಜಯವಾಣಿ ಸುದ್ದಿಜಾಲ ಕಲಬುರಗಿ
ಸಿಬಿಐ ಅಂದರೆ ಕಾಂಗ್ರೆಸ್ ನಾಯಕರಿಗೆ ಮೊದಲಿನಿಂದಲೂ ಭಯ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಮುಡಾ ಪ್ರಕರಣದಲ್ಲಿ ಸಿಬಿಐ ತನಿಖೆಯಾಗಬೇಕು ಎಂಬುದು ನಮ್ಮ ಒತ್ತಾಯ. ಕೋರ್ಟ್ ತೀರ್ಪು ಕಾಯ್ದಿರಿಸಿದೆ. ತೀರ್ಪು ಏನು ಬರುತ್ತೋ ಕಾದು ನೋಡೋಣ. ಅವರ ಹಗರಣ ಹೊರಗಡೆ ಬರುತ್ತದೆ ಎಂಬ ಹೆದರಿಕೆ ಕಾಂಗ್ರೆಸ್‌ನವರಲ್ಲಿದೆ. ಮೊದಲಿನಂದಲೂ ಸಿಬಿಐ ಅಂದರೆ ಕಾಂಗ್ರೆಸ್‌ಗೆ ಭಯ ಎಂದು ವ್ಯಂಗ್ಯವಾಡಿದರು.
ಕಲಬುರಗಿಯಲ್ಲಿ ಭಾರತೀಯ ಸಂಸ್ಕೃತಿ ಉತ್ಸವದ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಹಗರಣದಲ್ಲಿ ಭಾಗಿಯಾಗಿದ ಆರೋಪವಿರುವುದರಿಂದ ಸಿಬಿಐ ತನಿಖೆಯಿಂದ ಮಾತ್ರ ಸತ್ಯ ಹೊರಬರಲು ಸಾಧ್ಯ. ಆದರೆ, ರಾಜ್ಯ ಸರ್ಕಾರ, ಸಿಬಿಐಗೆ ವಹಿಸಿಕೊಡಲು ಹಿಂದೇಟು ಹಾಕುತ್ತಿದೆ ಎಂದರು.
ಬಿಜೆಪಿ ರಾಜ್ಯ ಅಧ್ಯP್ಷÀ ಸ್ಥಾನಕ್ಕೆ ನಾನು ಸ್ಪರ್ಧೆಗೆ ಸಿದ್ದ ಎನ್ನುವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಶೆಟ್ಟರ್, ಕೆಲವೊಬ್ಬರ ವೈಯಕ್ತಿಕ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ರಾಜ್ಯದ ಬೆಳವಣಿಗೆ ಕುರಿತು ವರಿಷ್ಠರ ಗಮನಕ್ಕಿದೆ. ಆದಷ್ಟು ಶೀಘ್ರ ರಾಜ್ಯ ಬಿಜೆಪಿಯ ಗೊಂದಲಕ್ಕೆ ತೆರೆ ಎಳೆಯುತ್ತಾರೆ ಎಂದು ಹೇಳಿದರು. ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದೆÃವಾಡಗಿ ಇದ್ದರು.