ಜಿಲ್ಲೆ

ಮುಡಾ ಅಧ್ಯಕ್ಷ ರವಿಶಂಕರ್‌ ಮಿಜಾರ್‌ ನಾಮನಿರ್ದೇಶನ ರದ್ದು

reportermng

ಮಂಗಳೂರು: ರಾಜ್ಯ ಸರ್ಕಾರ ರಾಜ್ಯದ ವಿವಿಧೆಡೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಗೊಳಿಸಿದ್ದು, ಅದರಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರ್‌ ಅವರ ನಾಮನಿರ್ದೇಶನವೂ ರದ್ದುಗೊಂಡಿದೆ. 2020ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಸುಮಾರು ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ನಗರದಲ್ಲಿ ವಿವಿಧ ಪಾರ್ಕ್‌, ಕೆರೆಗಳ ಅಭಿವೃದ್ಧಿಗೆ ಮುಡಾ ಪಾಲಿಕೆಯೊಂದಿಗೆ ಕೈಜೋಡಿಸಿತ್ತು. ಕೊಣಾಜೆ, ಕುಂಜತ್ತಬೈಲ್‌ ಮತ್ತು ಚೇಳ್ಯಾರ್‌ನಲ್ಲಿ ವಸತಿ ಬಡಾವಣೆ ನಿರ್ಮಾಣದ ಉದ್ದೇಶ ಹೊಂದಿದ್ದರು. 15 ವರ್ಷಗಳ ಬಳಿಕ ಮುಡಾದಿಂದ ಜನರಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಿದ್ದರು. ಇದೀಗ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆಯೇ ಎಂದು ಕಾದು ನೋಡಬೇಕಿದೆ.